ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.
Cross references
ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ
ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.
ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
ಆ ಒರಟು ಹೋತವು ಗ್ರೀಕ್‌ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.
ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.