Home Bibles ದಾನಿಯೇಲ 2:48 · ಕನ್ನಡ ಬೈಬಲ್
ದಾನಿಯೇಲ 2:48 · ಕನ್ನಡ ಬೈಬಲ್

ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.

Cross references

ಆದಿಕಾಂಡ 41:39

ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.

ಆದಿಕಾಂಡ 41:41

ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.

ಆದಿಕಾಂಡ 41:43

ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.

ಅಂಕೆಗಳ ಪುಸ್ತಕ 22:16

ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.

ಅಂಕೆಗಳ ಪುಸ್ತಕ 24:11

ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.

1 ಸಮುವೇಲ 17:25

ಇಸ್ರಾಯೇಲ್‌ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.

1 ಸಮುವೇಲ 25:2

ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.

2 ಸಮುವೇಲ 19:32

ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.

2 ಅರಸುಗಳು 5:1

ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.

ಯೋಬ 1:3

ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.

ಯೆರೆಮಿಯ 5:5

ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;

ದಾನಿಯೇಲ 2:6

ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.

ದಾನಿಯೇಲ 3:1

ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್‌ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.

ದಾನಿಯೇಲ 3:12

ಈಗ ನೀನು ಬಾಬೆಲ್‌ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್‌ ಮೇಷಕ್‌ ಅಬೇದ್‌ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.

ದಾನಿಯೇಲ 3:30

ಆಗ ಅರಸನು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್‌ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.

ದಾನಿಯೇಲ 4:6

ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.

ದಾನಿಯೇಲ 4:9

ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.

ದಾನಿಯೇಲ 5:7

ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.

ದಾನಿಯೇಲ 5:11

ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.

ದಾನಿಯೇಲ 5:16

ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.

ದಾನಿಯೇಲ 5:29

ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.

ದಾನಿಯೇಲ 6:1

ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.

Interlinear

Choose Theme