Home Bibles ದಾನಿಯೇಲ 3:12 · ಕನ್ನಡ ಬೈಬಲ್
ದಾನಿಯೇಲ 3:12 · ಕನ್ನಡ ಬೈಬಲ್

ಈಗ ನೀನು ಬಾಬೆಲ್‌ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್‌ ಮೇಷಕ್‌ ಅಬೇದ್‌ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.

Cross references

1 ಸಮುವೇಲ 18:7

ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.

ಎಸ್ತೇರ್ 3:8

ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.

ಸಾಮೇತಿಗಳು 27:4

ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?

ಸಭಾಪ್ರಸಂಗಿ 4:4

ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.

ದಾನಿಯೇಲ 2:49

ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.

ದಾನಿಯೇಲ 6:13

ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.

ದಾನಿಯೇಲ 6:14

ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.

ಅಪೋಸ್ತಲರ ಕೃತ್ಯಗಳು 5:28

ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.

ಅಪೋಸ್ತಲರ ಕೃತ್ಯಗಳು 17:7

ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.

Interlinear

Choose Theme