ಆಗ ಅರಸನು ಶದ್ರಕ್ ಮೇಷಕ್ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
Cross references
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್‌ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?