Home Bibles ದಾನಿಯೇಲ 4:21 · ಕನ್ನಡ ಬೈಬಲ್
ದಾನಿಯೇಲ 4:21 · ಕನ್ನಡ ಬೈಬಲ್

ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು.

Cross references

ಕೀರ್ತನೆಗಳು 104:17

ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.

ಯೆಹೆಜ್ಕೇಲ 17:23

ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.

ಯೆಹೆಜ್ಕೇಲ 31:6

ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.

ದಾನಿಯೇಲ 2:38

ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.

ದಾನಿಯೇಲ 4:11

ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.

ಲೂಕ 13:19

ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.

Interlinear

Choose Theme