Home Bibles ದಾನಿಯೇಲ 5:21 · ಕನ್ನಡ ಬೈಬಲ್
ದಾನಿಯೇಲ 5:21 · ಕನ್ನಡ ಬೈಬಲ್

ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.

Cross references

ನಿರ್ಗಮಕಾಂಡ 9:14

ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.

ಯೋಬ 30:3

ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ;

ಕೀರ್ತನೆಗಳು 83:17

ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.

ಯೆಹೆಜ್ಕೇಲ 17:24

ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.

ದಾನಿಯೇಲ 4:14

ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.

ದಾನಿಯೇಲ 4:17

ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.

ದಾನಿಯೇಲ 4:22

ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.

ದಾನಿಯೇಲ 4:25

ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.

ದಾನಿಯೇಲ 4:26

ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.

ದಾನಿಯೇಲ 4:32

ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.

ದಾನಿಯೇಲ 4:35

ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.

ದಾನಿಯೇಲ 4:37

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.

Interlinear

Choose Theme