ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
Cross references
ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
ನೆಬೂಕದ್ನೆಚ್ಚರನೆಂಬ ನಾನು ನನ್ನ ಮನೆಯಲ್ಲಿ ಕ್ಷೇಮವಾಗಿಯೂ ನನ್ನ ಅರಮನೆಯಲ್ಲಿ ಸುಖವಾ ಗಿಯೂ ಇರುವಾಗ;
ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.