ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.
Cross references
ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ.
ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.