ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
Cross references
ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.