ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.
Cross references
ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.