ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
Cross references
ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.
ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.
ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.