Home Bibles ದಾನಿಯೇಲ 7:4 · ಕನ್ನಡ ಬೈಬಲ್
ದಾನಿಯೇಲ 7:4 · ಕನ್ನಡ ಬೈಬಲ್

ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.

Cross references

ದ್ವಿತೀಯೋಪದೇಶಕಾಂಡ 28:49

ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ

2 ಸಮುವೇಲ 1:23

ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.

ಯೋಬ 25:6

ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?

ಕೀರ್ತನೆಗಳು 9:20

ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.

ಯೆಶಾಯ 5:28

ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.

ಯೆಶಾಯ 14:13

ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.

ಯೆರೆಮಿಯ 4:7

ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.

ಯೆರೆಮಿಯ 4:13

ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.

ಯೆರೆಮಿಯ 25:9

ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.

ಯೆರೆಮಿಯ 49:19

ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್‌ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.

ಯೆರೆಮಿಯ 50:30

ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.

ವಿಲಾಪಗಳು 4:19

ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.

ಯೆಹೆಜ್ಕೇಲ 17:3

ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.

ಯೆಹೆಜ್ಕೇಲ 28:2

ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.

ಯೆಹೆಜ್ಕೇಲ 28:9

ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;

ದಾನಿಯೇಲ 2:38

ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.

ದಾನಿಯೇಲ 4:30

ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.

ದಾನಿಯೇಲ 4:36

ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.

ದಾನಿಯೇಲ 5:18

ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.

ದಾನಿಯೇಲ 7:12

ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು.

ಹಬಕ್ಕೂಕ 1:6

ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.

ಹಬಕ್ಕೂಕ 2:5

ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.

ಮತ್ತಾಯ 24:28

ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.

Interlinear

Choose Theme