Home Bibles ದಾನಿಯೇಲ 7:6 · ಕನ್ನಡ ಬೈಬಲ್
ದಾನಿಯೇಲ 7:6 · ಕನ್ನಡ ಬೈಬಲ್

ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

Cross references

ಯೆಹೆಜ್ಕೇಲ 17:3

ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.

ದಾನಿಯೇಲ 2:39

ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.

ದಾನಿಯೇಲ 7:4

ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.

ದಾನಿಯೇಲ 8:5

ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.

ದಾನಿಯೇಲ 8:20

ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.

ದಾನಿಯೇಲ 8:21

ಆ ಒರಟು ಹೋತವು ಗ್ರೀಕ್‌ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.

ದಾನಿಯೇಲ 10:20

ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್‌ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.

ದಾನಿಯೇಲ 11:3

ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.

ಹೊಶೇಯ 13:7

ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು.

ಪ್ರಕಟನೆ 13:2

ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.

Interlinear

Choose Theme