ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.
Cross references
ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
ಆಶೇರ್ ಗೋತ್ರದ ವಿಾಕಾ ಯೇಲನ ಮಗನಾದ ಸೆತೂರ್,
ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.
ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.