Home Bibles ದ್ವಿತೀಯೋಪದೇಶಕಾಂಡ 1:2 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 1:2 · ಕನ್ನಡ ಬೈಬಲ್

(ಹೋರೇಬಿನಿಂದ ಕಾದೇಶ್‌ ಬರ್ನೇಯಕ್ಕೆ ಸೇಯಾರ್‌ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).

Cross references

ನಿರ್ಗಮಕಾಂಡ 3:1

ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್‌ ಎಂಬ ದೇವರ ಬೆಟ್ಟಕ್ಕೆ ಬಂದನು.

ಲೇವ್ಯಕಾಂಡ 2:14

ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.

ಲೇವ್ಯಕಾಂಡ 9:23

ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.

ಅಂಕೆಗಳ ಪುಸ್ತಕ 13:26

ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್‌ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.

ಅಂಕೆಗಳ ಪುಸ್ತಕ 20:17

ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.

ಅಂಕೆಗಳ ಪುಸ್ತಕ 32:8

ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.

ದ್ವಿತೀಯೋಪದೇಶಕಾಂಡ 1:19

ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.

ದ್ವಿತೀಯೋಪದೇಶಕಾಂಡ 1:44

ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.

ದ್ವಿತೀಯೋಪದೇಶಕಾಂಡ 2:4

ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.

ದ್ವಿತೀಯೋಪದೇಶಕಾಂಡ 2:8

ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್‌, ಎಚ್ಯೋನ್ಗೆಬೆರ್‌ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.

ದ್ವಿತೀಯೋಪದೇಶಕಾಂಡ 9:23

ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.

ಯೆಹೋಶುವ 14:6

ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್‌ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;

Interlinear

Choose Theme