Home Bibles ದ್ವಿತೀಯೋಪದೇಶಕಾಂಡ 1:35 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 1:35 · ಕನ್ನಡ ಬೈಬಲ್

ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.

Cross references

ದ್ವಿತೀಯೋಪದೇಶಕಾಂಡ 1:8

ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 2:14

ನಾವು ಕಾದೇಶ್‌ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್‌ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.

ಕೀರ್ತನೆಗಳು 95:11

ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.

ಯೆಹೆಜ್ಕೇಲ 20:15

ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.

Interlinear

Choose Theme