Home Bibles ☰ Books ದ್ವಿತೀಯೋಪದೇಶಕಾಂಡ 10:22 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 10:22 · ಕನ್ನಡ ಬೈಬಲ್

ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.

Cross references

ಆದಿಕಾಂಡ 15:5

ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.

ಆದಿಕಾಂಡ 46:26

ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.

ಆದಿಕಾಂಡ 46:27

ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.

ನಿರ್ಗಮಕಾಂಡ 1:5

ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.

ಅಂಕೆಗಳ ಪುಸ್ತಕ 26:51

ಇಸ್ರಾಯೇಲ್‌ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ.

ಅಂಕೆಗಳ ಪುಸ್ತಕ 26:62

ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್‌ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.

ದ್ವಿತೀಯೋಪದೇಶಕಾಂಡ 1:10

ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.

ದ್ವಿತೀಯೋಪದೇಶಕಾಂಡ 1:11

ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ.

ದ್ವಿತೀಯೋಪದೇಶಕಾಂಡ 26:5

ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.

ದ್ವಿತೀಯೋಪದೇಶಕಾಂಡ 28:62

ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.

ನೆಹೆಮ್ಯ 9:23

ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;

ಅಪೋಸ್ತಲರ ಕೃತ್ಯಗಳು 7:14

ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.

ಹೆಬ್ರಿಯರಿಗೆ 11:12

ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.

Interlinear

Choose Theme