ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
Cross references
ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ--
ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್ ಮಕ್ಕಳ ಪ್ರಯಾಣಗಳು ಇವೇ.
ಹಷ್ಮೋನ ದಿಂದ ಹೊರಟು ಮೋಸೇರೋತಿನಲ್ಲಿ ಇಳಿದು ಕೊಂಡರು.
ಮೋಸೇರೋತಿನಿಂದ ಹೊರಟು ಬೆನೇ ಯಾಕಾನಿನಲ್ಲಿ ಇಳಿದುಕೊಂಡರು.
ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.