ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
Cross references
ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.
ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು.
ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.