Home Bibles ದ್ವಿತೀಯೋಪದೇಶಕಾಂಡ 12:29 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 12:29 · ಕನ್ನಡ ಬೈಬಲ್

ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ

Cross references

ನಿರ್ಗಮಕಾಂಡ 23:23

ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.

ದ್ವಿತೀಯೋಪದೇಶಕಾಂಡ 9:3

ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.

ದ್ವಿತೀಯೋಪದೇಶಕಾಂಡ 19:1

ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ

ಯೆಹೋಶುವ 21:43

ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.

ಯೆಹೋಶುವ 23:4

ಇಗೋ, ನಾನು ಯೊರ್ದನ್‌ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.

2 ದಿನವೃತ್ತಾಂತ 33:2

ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.

ಕೀರ್ತನೆಗಳು 78:55

ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.

Interlinear

Choose Theme