Home Bibles ದ್ವಿತೀಯೋಪದೇಶಕಾಂಡ 14:21 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 14:21 · ಕನ್ನಡ ಬೈಬಲ್

ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.

Cross references

ನಿರ್ಗಮಕಾಂಡ 12:43

ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.

ನಿರ್ಗಮಕಾಂಡ 22:30

ಅದರಂತೆಯೇ ನಿನ್ನ ಎತ್ತುಗಳ ಲ್ಲಿಯೂ ಕುರಿಗಳಲ್ಲಿಯೂ ಮಾಡಬೇಕು. ಅದು ಏಳು ದಿನ ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನ ಅದನ್ನು ನನಗೆ ಕೊಡಬೇಕು.ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.

ನಿರ್ಗಮಕಾಂಡ 23:19

ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ನಿರ್ಗಮಕಾಂಡ 34:26

ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.

ಲೇವ್ಯಕಾಂಡ 11:40

ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.

ಲೇವ್ಯಕಾಂಡ 17:15

ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.

ಲೇವ್ಯಕಾಂಡ 19:33

ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.

ಲೇವ್ಯಕಾಂಡ 22:8

ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.

ದ್ವಿತೀಯೋಪದೇಶಕಾಂಡ 14:2

ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.

ಯೆಹೆಜ್ಕೇಲ 4:14

ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.

ದಾನಿಯೇಲ 8:24

ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.

ದಾನಿಯೇಲ 12:7

ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.

ಅಪೋಸ್ತಲರ ಕೃತ್ಯಗಳು 15:20

ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.

ರೋಮಾಪುರದವರಿಗೆ 12:2

ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.

1 ಪೇತ್ರ 1:16

ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.

Interlinear

Choose Theme