ದ್ವಿತೀಯೋಪದೇಶಕಾಂಡ 15:22 · ಕನ್ನಡ ಬೈಬಲ್
ಅದನ್ನು ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು. ಕಡವೆ ಜಿಂಕೆಗಳನ್ನು ತಿನ್ನುವ ಹಾಗೆ ಶುದ್ಧರೂ ಅಶುದ್ಧರೂ ಅದನ್ನು ನಿನ್ನ ಬಾಗಲು ಗಳಲ್ಲಿ ತಿನ್ನಬೇಕು.ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
Cross references
ದ್ವಿತೀಯೋಪದೇಶಕಾಂಡ 12:15
ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
ದ್ವಿತೀಯೋಪದೇಶಕಾಂಡ 12:21
ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.
ದ್ವಿತೀಯೋಪದೇಶಕಾಂಡ 12:22
ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ.