ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
Cross references
ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು.
ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
ಅದನ್ನು ತಿನ್ನದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.
ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು.
ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?