Home Bibles ದ್ವಿತೀಯೋಪದೇಶಕಾಂಡ 15:9 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 15:9 · ಕನ್ನಡ ಬೈಬಲ್

ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.

Cross references

ನಿರ್ಗಮಕಾಂಡ 3:7

ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.

ನಿರ್ಗಮಕಾಂಡ 22:22

ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.

ನಿರ್ಗಮಕಾಂಡ 22:23

ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.

ದ್ವಿತೀಯೋಪದೇಶಕಾಂಡ 15:1

ಪ್ರತಿ ಏಳು ವರುಷಗಳ ಅಂತ್ಯದಲ್ಲಿ ಬಿಡುಗಡೆಯನ್ನು ಮಾಡಬೇಕು.

ದ್ವಿತೀಯೋಪದೇಶಕಾಂಡ 24:15

ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.

ದ್ವಿತೀಯೋಪದೇಶಕಾಂಡ 28:54

ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.

ದ್ವಿತೀಯೋಪದೇಶಕಾಂಡ 31:10

ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ

ಯೋಬ 34:28

ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.

ಕೀರ್ತನೆಗಳು 9:12

ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.

ಸಾಮೇತಿಗಳು 4:23

ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.

ಸಾಮೇತಿಗಳು 14:21

ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.

ಸಾಮೇತಿಗಳು 21:13

ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.

ಸಾಮೇತಿಗಳು 23:6

ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;

ಸಾಮೇತಿಗಳು 24:9

ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.

ಸಾಮೇತಿಗಳು 28:22

ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.

ಯೆರೆಮಿಯ 17:10

ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.

ಯೆರೆಮಿಯ 34:14

ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.

ಮತ್ತಾಯ 15:19

ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.

ಮತ್ತಾಯ 20:15

ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.

ಮತ್ತಾಯ 25:41

ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

ಮಾರ್ಕ 7:21

ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು

ರೋಮಾಪುರದವರಿಗೆ 7:8

ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.

ಯಾಕೋಬ 4:5

ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?

ಯಾಕೋಬ 4:17

ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.

ಯಾಕೋಬ 5:4

ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.

ಯಾಕೋಬ 5:9

ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.

1 ಪೇತ್ರ 4:9

ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.

1 ಯೋಹಾನ 3:15

ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.

Interlinear

Choose Theme