ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
Cross references
ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.