Home Bibles ದ್ವಿತೀಯೋಪದೇಶಕಾಂಡ 17:7 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 17:7 · ಕನ್ನಡ ಬೈಬಲ್

ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

Cross references

ದ್ವಿತೀಯೋಪದೇಶಕಾಂಡ 13:5

ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.

ದ್ವಿತೀಯೋಪದೇಶಕಾಂಡ 13:6

ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು

ದ್ವಿತೀಯೋಪದೇಶಕಾಂಡ 13:9

ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.

ದ್ವಿತೀಯೋಪದೇಶಕಾಂಡ 13:10

ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.

ದ್ವಿತೀಯೋಪದೇಶಕಾಂಡ 17:12

ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;

ದ್ವಿತೀಯೋಪದೇಶಕಾಂಡ 19:19

ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.

ದ್ವಿತೀಯೋಪದೇಶಕಾಂಡ 21:21

ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.

ದ್ವಿತೀಯೋಪದೇಶಕಾಂಡ 22:21

ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;

ದ್ವಿತೀಯೋಪದೇಶಕಾಂಡ 22:22

ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.

ದ್ವಿತೀಯೋಪದೇಶಕಾಂಡ 22:24

ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.

ದ್ವಿತೀಯೋಪದೇಶಕಾಂಡ 24:7

ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.

ನ್ಯಾಯಾಧಿಪತಿಗಳು 20:13

ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.

ಅಪೋಸ್ತಲರ ಕೃತ್ಯಗಳು 7:58

ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.

1 ಕೊರಿಂಥದವರಿಗೆ 5:13

ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.

Interlinear

Choose Theme