Home Bibles ದ್ವಿತೀಯೋಪದೇಶಕಾಂಡ 19:10 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 19:10 · ಕನ್ನಡ ಬೈಬಲ್

ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.

Cross references

ಅಂಕೆಗಳ ಪುಸ್ತಕ 35:33

ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.

ದ್ವಿತೀಯೋಪದೇಶಕಾಂಡ 4:21

ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.

ದ್ವಿತೀಯೋಪದೇಶಕಾಂಡ 19:13

ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.

ದ್ವಿತೀಯೋಪದೇಶಕಾಂಡ 21:1

ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ

ದ್ವಿತೀಯೋಪದೇಶಕಾಂಡ 26:1

ಇದಲ್ಲದೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ

1 ಅರಸುಗಳು 2:31

ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.

2 ಅರಸುಗಳು 21:16

ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.

2 ಅರಸುಗಳು 24:4

ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.

ಕೀರ್ತನೆಗಳು 94:21

ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.

ಸಾಮೇತಿಗಳು 6:17

ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,

ಯೆಶಾಯ 59:7

ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.

ಯೆರೆಮಿಯ 7:6

ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.

ಯೋವೇಲ 3:19

ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.

ಯೋನ 1:14

ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.

ಮತ್ತಾಯ 27:4

ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.

Interlinear

Choose Theme