Home Bibles ☰ Books ದ್ವಿತೀಯೋಪದೇಶಕಾಂಡ 19:11 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 19:11 · ಕನ್ನಡ ಬೈಬಲ್

ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ

Cross references

ಆದಿಕಾಂಡ 9:5

ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.

ಆದಿಕಾಂಡ 9:6

ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.

ನಿರ್ಗಮಕಾಂಡ 21:12

ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.

ನಿರ್ಗಮಕಾಂಡ 21:14

ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.

ಅಂಕೆಗಳ ಪುಸ್ತಕ 35:16

ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.

ಅಂಕೆಗಳ ಪುಸ್ತಕ 35:24

ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.

ದ್ವಿತೀಯೋಪದೇಶಕಾಂಡ 27:24

ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

ಸಾಮೇತಿಗಳು 28:17

ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.

Interlinear

Choose Theme