Home Bibles ದ್ವಿತೀಯೋಪದೇಶಕಾಂಡ 19:2 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 19:2 · ಕನ್ನಡ ಬೈಬಲ್

ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.

Cross references

ನಿರ್ಗಮಕಾಂಡ 21:13

ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.

ಅಂಕೆಗಳ ಪುಸ್ತಕ 35:10

ನೀನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್‌ ದೇಶಕ್ಕೆ ಬಂದಾಗ

ದ್ವಿತೀಯೋಪದೇಶಕಾಂಡ 3:18

ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್‌ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.

ದ್ವಿತೀಯೋಪದೇಶಕಾಂಡ 4:41

ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.

ದ್ವಿತೀಯೋಪದೇಶಕಾಂಡ 4:42

ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.

ಯೆಹೋಶುವ 20:2

ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.

ಹೆಬ್ರಿಯರಿಗೆ 6:18

ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.

Interlinear

Choose Theme