Home Bibles ☰ Books ದ್ವಿತೀಯೋಪದೇಶಕಾಂಡ 2:1 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 2:1 · ಕನ್ನಡ ಬೈಬಲ್

ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್‌ ಬೆಟ್ಟವನ್ನು ಸುತ್ತಿಕೊಂಡೆವು.

Cross references

ಅಂಕೆಗಳ ಪುಸ್ತಕ 14:25

(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.

ಅಂಕೆಗಳ ಪುಸ್ತಕ 21:4

ಅವರು ಹೋರ್‌ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,

ದ್ವಿತೀಯೋಪದೇಶಕಾಂಡ 1:2

(ಹೋರೇಬಿನಿಂದ ಕಾದೇಶ್‌ ಬರ್ನೇಯಕ್ಕೆ ಸೇಯಾರ್‌ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).

ದ್ವಿತೀಯೋಪದೇಶಕಾಂಡ 1:40

ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.

ನ್ಯಾಯಾಧಿಪತಿಗಳು 11:18

ಅರಣ್ಯದಲ್ಲಿ ನಡೆದು ಎದೋಮ್‌ ದೇಶವನ್ನೂ ಮೋವಾಬ್‌ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್‌ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.

Interlinear

Choose Theme