ದ್ವಿತೀಯೋಪದೇಶಕಾಂಡ 2:13 · ಕನ್ನಡ ಬೈಬಲ್
ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
Cross references
ಅಂಕೆಗಳ ಪುಸ್ತಕ 13:23
ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
ಅಂಕೆಗಳ ಪುಸ್ತಕ 21:12
ಅಲ್ಲಿಂದ ಅವರು ಹೊರಟು ಜೆರೆದೆಂಬ ತಗ್ಗಿನಲ್ಲಿ ಇಳುಕೊಂಡರು.
ಅಂಕೆಗಳ ಪುಸ್ತಕ 21:13
ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.