ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
Cross references
ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.
ಅನಾಕ್ಯರು ಇಸ್ರಾಯೇಲ್ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್‌ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
ಇದಲ್ಲದೆ ಯೂದನು ಗಾಜಾವನ್ನೂ ಅದರ ಮೇರೆಯನ್ನೂ ಅಷ್ಕೆಲೋನನ್ನ್ನೂ ಅದರ ಮೇರೆಯನ್ನೂ ಎಕ್ರೋನನ್ನ್ನೂ ಅದರ ಮೇರೆ ಯನ್ನೂ ತೆಗೆದುಕೊಂಡನು.
ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.
ಇದಲ್ಲದೆ ಕಿರ್ಯತ್‌ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು.
ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.