Home Bibles ದ್ವಿತೀಯೋಪದೇಶಕಾಂಡ 2:34 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 2:34 · ಕನ್ನಡ ಬೈಬಲ್

ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.

Cross references

ಲೇವ್ಯಕಾಂಡ 27:28

ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.

ಅಂಕೆಗಳ ಪುಸ್ತಕ 21:2

ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.

ದ್ವಿತೀಯೋಪದೇಶಕಾಂಡ 3:6

ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.

ದ್ವಿತೀಯೋಪದೇಶಕಾಂಡ 7:2

ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.

ದ್ವಿತೀಯೋಪದೇಶಕಾಂಡ 7:26

ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.

ದ್ವಿತೀಯೋಪದೇಶಕಾಂಡ 20:16

ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.

ಯೆಹೋಶುವ 6:21

ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.

ಯೆಹೋಶುವ 7:11

ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.

ಯೆಹೋಶುವ 8:25

ಆ ದಿನದಲ್ಲಿ ಬಿದ್ದ ಸ್ತ್ರೀ ಪುರುಷರಾದ ಆಯಿಯ ಮನುಷ್ಯರೆಲ್ಲರು ಹನ್ನೆರಡು ಸಾವಿರ ಜನರು.

ಯೆಹೋಶುವ 8:26

ಯೆಹೋಶುವನು ಆಯಿಯ ನಿವಾಸಿಗಳೆಲ್ಲರನ್ನು ಸಂಪೂರ್ಣ ನಾಶಮಾಡುವ ವರೆಗೂ ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.

ಯೆಹೋಶುವ 9:24

ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.

ಯೆಹೋಶುವ 10:28

ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.

ಯೆಹೋಶುವ 10:40

ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.

ಯೆಹೋಶುವ 11:14

ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.

1 ಸಮುವೇಲ 15:3

ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.

1 ಸಮುವೇಲ 15:8

ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.

Interlinear

Choose Theme