ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
Cross references
ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.
ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.