Home Bibles ☰ Books ದ್ವಿತೀಯೋಪದೇಶಕಾಂಡ 23:1 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 23:1 · ಕನ್ನಡ ಬೈಬಲ್

ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು.

Cross references

ಲೇವ್ಯಕಾಂಡ 18:8

ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.

ಲೇವ್ಯಕಾಂಡ 21:17

ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.

ಲೇವ್ಯಕಾಂಡ 22:22

ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು.

ಲೇವ್ಯಕಾಂಡ 22:24

ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.

ದ್ವಿತೀಯೋಪದೇಶಕಾಂಡ 23:2

ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು.

ದ್ವಿತೀಯೋಪದೇಶಕಾಂಡ 23:8

ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.

ದ್ವಿತೀಯೋಪದೇಶಕಾಂಡ 27:20

ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

ನೆಹೆಮ್ಯ 13:1

ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.

ಯೆಶಾಯ 56:3

ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.

ವಿಲಾಪಗಳು 1:10

ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.

ಗಲಾತ್ಯದವರಿಗೆ 3:28

ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

Interlinear

Choose Theme