ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
Cross references
ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ.
ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.