Home Bibles ದ್ವಿತೀಯೋಪದೇಶಕಾಂಡ 23:3 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 23:3 · ಕನ್ನಡ ಬೈಬಲ್

ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.

Cross references

ರೂತ 4:6

ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;

ರೂತ 4:10

ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.

ನೆಹೆಮ್ಯ 4:3

ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.

ನೆಹೆಮ್ಯ 4:7

ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ

ನೆಹೆಮ್ಯ 13:1

ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.

ನೆಹೆಮ್ಯ 13:23

ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.

ಯೆಶಾಯ 56:3

ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.

ವಿಲಾಪಗಳು 1:10

ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.

Interlinear

Choose Theme