ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
Cross references
ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು.
ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು.
ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ
ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು.
ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು.
ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
ಹದದನು ಮಾಡಿದ ಕೇಡು ಹೊರತಾಗಿ ಇವನು ಸೊಲೊ ಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲ್ಯರಿಗೆ ಶತ್ರು ವಾಗಿದ್ದನು. ಅವನು ಇಸ್ರಾಯೇಲ್ಯರನ್ನು ಹಗೆ ಮಾಡಿ ಅರಾಮ್ ದೇಶವನ್ನು ಆಳುತ್ತಾ ಇದ್ದನು.
ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು.
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.