Home Bibles ದ್ವಿತೀಯೋಪದೇಶಕಾಂಡ 23:9 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 23:9 · ಕನ್ನಡ ಬೈಬಲ್

ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಸೈನ್ಯ ದೊಡನೆ ಹೊರಟರೆ ದುಷ್ಟ ಕಾರ್ಯಗಳಿಗೆಲ್ಲಾ ದೂರ ವಾಗಿರುವಂತೆ ನಿನ್ನನ್ನು ಕಾಪಾಡಿಕೋ.

Cross references

ಯೆಹೋಶುವ 6:18

ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.

ಯೆಹೋಶುವ 7:11

ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.

ನ್ಯಾಯಾಧಿಪತಿಗಳು 20:26

ಆಗ ಇಸ್ರಾಯೇಲ್‌ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ

2 ದಿನವೃತ್ತಾಂತ 19:4

ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ

2 ದಿನವೃತ್ತಾಂತ 20:3

ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.

2 ದಿನವೃತ್ತಾಂತ 31:20

ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.

ಯೆಶಾಯ 56:3

ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.

ಲೂಕ 3:14

ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.

ಪ್ರಕಟನೆ 19:11

ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

Interlinear

Choose Theme