Home Bibles ☰ Books ದ್ವಿತೀಯೋಪದೇಶಕಾಂಡ 24:1 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 24:1 · ಕನ್ನಡ ಬೈಬಲ್

ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.

Cross references

ನಿರ್ಗಮಕಾಂಡ 21:10

ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.

ದ್ವಿತೀಯೋಪದೇಶಕಾಂಡ 21:15

ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ

ದ್ವಿತೀಯೋಪದೇಶಕಾಂಡ 22:13

ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳ ಬಳಿಗೆ ಬಂದ ಮೇಲೆ ಅವಳನ್ನು ಹಗೆಮಾಡಿ

ದ್ವಿತೀಯೋಪದೇಶಕಾಂಡ 22:19

ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.

ದ್ವಿತೀಯೋಪದೇಶಕಾಂಡ 22:29

ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.

ದ್ವಿತೀಯೋಪದೇಶಕಾಂಡ 24:3

ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ

ಯೆಶಾಯ 50:1

ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.

ಯೆರೆಮಿಯ 3:1

ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 3:8

ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.

ಮಲಾಕಿ 2:16

ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.

ಮತ್ತಾಯ 1:19

ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.

ಮತ್ತಾಯ 5:31

ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;

ಮತ್ತಾಯ 19:7

ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.

ಮಾರ್ಕ 10:4

ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.

ಲೂಕ 16:18

ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.

Interlinear

Choose Theme