ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
Cross references
ಕರ್ತನಿಗೆ ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಮಾಡುವವನು ಸಂಪೂರ್ಣವಾಗಿ ನಾಶವಾಗಬೇಕು.
ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.
ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.
ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.
ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.