Home Bibles ದ್ವಿತೀಯೋಪದೇಶಕಾಂಡ 24:4 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 24:4 · ಕನ್ನಡ ಬೈಬಲ್

ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.

Cross references

ಲೇವ್ಯಕಾಂಡ 18:24

ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.

ದ್ವಿತೀಯೋಪದೇಶಕಾಂಡ 4:21

ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.

ದ್ವಿತೀಯೋಪದೇಶಕಾಂಡ 20:16

ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.

ಯೆಹೋಶುವ 22:17

ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.

ಯೆರೆಮಿಯ 3:1

ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.

Interlinear

Choose Theme