ಇದಲ್ಲದೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ
Cross references
ಇಸ್ರಾಯೇಲ್‌ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ
ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು
ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ
ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.