ಶಪಿಸುವದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು.
Cross references
ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.