Home Bibles ದ್ವಿತೀಯೋಪದೇಶಕಾಂಡ 27:22 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 27:22 · ಕನ್ನಡ ಬೈಬಲ್

ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

Cross references

ಲೇವ್ಯಕಾಂಡ 18:9

ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.

ಲೇವ್ಯಕಾಂಡ 20:17

ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.

2 ಸಮುವೇಲ 13:1

ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.

2 ಸಮುವೇಲ 13:8

ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.

ಯೆಹೆಜ್ಕೇಲ 22:11

ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.

Interlinear

Choose Theme