Home Bibles ದ್ವಿತೀಯೋಪದೇಶಕಾಂಡ 28:18 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 28:18 · ಕನ್ನಡ ಬೈಬಲ್

ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.

Cross references

ಲೇವ್ಯಕಾಂಡ 26:19

ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.

ಲೇವ್ಯಕಾಂಡ 26:26

ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.

ದ್ವಿತೀಯೋಪದೇಶಕಾಂಡ 5:9

ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.

ದ್ವಿತೀಯೋಪದೇಶಕಾಂಡ 28:4

ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.

ದ್ವಿತೀಯೋಪದೇಶಕಾಂಡ 28:16

ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ;

ಯೋಬ 18:16

ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;

ಕೀರ್ತನೆಗಳು 109:9

ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.

ವಿಲಾಪಗಳು 2:11

ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.

ವಿಲಾಪಗಳು 2:20

ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?

ಹೊಶೇಯ 9:11

ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ.

ಹೊಶೇಯ 9:12

ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!

ಹೊಶೇಯ 9:14

ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.

ಹಬಕ್ಕೂಕ 3:17

ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ

ಮಲಾಕಿ 2:3

ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.

ಲೂಕ 23:29

ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.

Interlinear

Choose Theme