Home Bibles ದ್ವಿತೀಯೋಪದೇಶಕಾಂಡ 28:25 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 28:25 · ಕನ್ನಡ ಬೈಬಲ್

ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.

Cross references

ಲೇವ್ಯಕಾಂಡ 26:17

ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.

ಲೇವ್ಯಕಾಂಡ 26:36

ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.

ದ್ವಿತೀಯೋಪದೇಶಕಾಂಡ 28:7

ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.

ದ್ವಿತೀಯೋಪದೇಶಕಾಂಡ 32:30

ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?

2 ದಿನವೃತ್ತಾಂತ 6:24

ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ

ಯೆಶಾಯ 30:17

ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.

ಯೆರೆಮಿಯ 15:2

ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;

ಯೆರೆಮಿಯ 24:9

ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.

ಯೆರೆಮಿಯ 29:18

ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.

ಯೆರೆಮಿಯ 34:17

ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.

ಯೆಹೆಜ್ಕೇಲ 23:46

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು.

ಹೊಶೇಯ 8:3

ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.

ಲೂಕ 21:24

ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.

Interlinear

Choose Theme