ದ್ವಿತೀಯೋಪದೇಶಕಾಂಡ 28:42 · ಕನ್ನಡ ಬೈಬಲ್
ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.
Cross references
ದ್ವಿತೀಯೋಪದೇಶಕಾಂಡ 28:38
ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
1 ಅರಸುಗಳು 8:37
ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
ಆಮೋಸ 4:9
ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ಆಮೋಸ 7:1
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.