Home Bibles ದ್ವಿತೀಯೋಪದೇಶಕಾಂಡ 28:64 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 28:64 · ಕನ್ನಡ ಬೈಬಲ್

ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.

Cross references

ಲೇವ್ಯಕಾಂಡ 26:33

ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.

ದ್ವಿತೀಯೋಪದೇಶಕಾಂಡ 4:27

ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.

ದ್ವಿತೀಯೋಪದೇಶಕಾಂಡ 13:8

ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.

ದ್ವಿತೀಯೋಪದೇಶಕಾಂಡ 28:36

ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.

ನೆಹೆಮ್ಯ 1:8

ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.

ಯೆರೆಮಿಯ 16:13

ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.

ಯೆರೆಮಿಯ 50:17

ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.

ಯೆಹೆಜ್ಕೇಲ 11:16

ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.

ಆಮೋಸ 9:9

ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.

ಜೆಕರ್ಯ 2:10

ಚೀಯೋನ್‌ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.

ಲೂಕ 21:24

ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.

Interlinear

Choose Theme