ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
Cross references
ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.
ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು.
ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.
ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ